DCC Bank Scam: ಪರಪ್ಪನ ಅಗ್ರಹಾರ ಜೈಲಿನಲ್ಲಿರುವಆರ್.ಎಂ.ಮಂಜುನಾಥಗೌಡಗೆ ಸೇರಿದ ಕೋಟ್ಯಾಂತರ ರೂಪಾಯಿ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಬೆನ್ನಲ್ಲೇ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಲ್ಲಿ ತನಿಖೆಯ ಭಯ ಪ್ರಾರಂಭವಾಗಿದೆ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡಗೆ ಮತ್ತೊಂದು ಶಾಕ್ ಎದುರಾಗಿದ್ದು, ಅವರ ಕೋಟ್ಯಾಂತರ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ..ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ (DCC BANK) ನಕಲಿ ಚಿನ್ನಾಭರಣ ಅಡಮಾನ (Gold Loan) ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡಗೆ (RM Manjunath Gowda) ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಸದ್ಯ ಮಂಜುನಾಥ್ ಗೌಡ ಅವರ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಂಡಿದೆ.2014 ರಲ್ಲಿ ಮಂಜುನಾಥ ಗೌಡ ಬ್ಯಾಂಕಿನ ಅಧ್ಯಕ್ಷರಾಗಿದ್ದಾಗ
ಈ ಹಗರಣ ನಡೆದಿದ್ದು, ಆಗ ತನಿಖೆ ನಡೆಸಿದ್ದ ಸಿಐಡಿ ಮಂಜುನಾಥ ಗೌಡ ಅವರನ್ನು ಬಂಧಿಸಿತ್ತು. ಬಳಿಕ ಪ್ರಕರಣ ಇಡಿಗೆ ವರ್ಗಾವಣೆಗೊಂಡಿತ್ತು. ಸದ್ಯ ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿರುವ ಆರ್.ಎಂ. ಮಂಜುನಾಥ್ ಗೌಡ ಜೈಲಿನಲ್ಲಿದ್ದು, ಅವರಿಗೆ ಸೇರಿದ ₹13.91 ಕೋಟಿ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.ಕಳೆದ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಕೋಟ್ಯಂತರ ರೂ ಗಳನ್ನು ಖರ್ಚು ಮಾಡಿ ವಾಮ ಮಾರ್ಗದಿಂದ ಚುನಾವಣೆಯಲ್ಲಿ ಗೆದ್ದು ಬಂದ ಸಹಕಾರಿಗಳಲ್ಲಿ ಕೆಲವರು ರಾಜ್ಯ ಒಕ್ಕಲಿಗರ ಸಂಘದಲ್ಲಿ ಅವ್ಯವಹಾರ ಮಾಡಿರುವುದು ಸಂಘದ ಸದಸ್ಯರಲ್ಲೇ ಅಪಸ್ವರಕ್ಕೆ ಕಾರಣವಾಗಿದೆ, ಕೆಲವು ಸದಸ್ಯರುಗಳ ಮೇಲೆ ಈಗಾಗಲೇ ಸಹಕಾರಿ ಸಂಘಗಳಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆಗೆ ತನಿಖಾ ಸಂಸ್ಥೆಗಳಿಂದ ತಯಾರಿ ನಡೆದಿದೆ ಎಂದು ನಂಬಲಾರ್ಹ ಮೂಲಗಳಿಂದ ತಿಳಿದುಬಂದಿದೆ.